

ಸುಳ್ಯ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಸಹಯೋಗದಲ್ಲಿ ಜಿಲ್ಲಾಮಟ್ಟದ ಪ.ಪೂ. ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗ ಶ್ರೀ ಶಾರದಾಂಬ ವೇದಿಕೆಯಲ್ಲಿ ನಡೆಯಿತು.
ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ್ ಶೆಟ್ಟಿ ಉದ್ಘಾಟಿಸಿದರು. ಎಒಎಲ್‌ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು. ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್‌ದಾಸ್, ಕಾಲೇಜು ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ. ರೈ, ಪದವಿ ವಿಭಾಗದ ಪ್ರಾಚಾರ್ಯ ಡಾ.ರುದ್ರ ಕುಮಾರ್ ಎಂ.ಎಂ., ಎನ್‌ಎಂಪಿಯು ಕಾಲೇಜಿನ ಕಬಡ್ಡಿ ಕೋಚ್ ನಾಗರಾಜ್ ನಾಯ್ಕ ಭಟ್ಕಳ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ.ಬಿ. ಉಪಸ್ಥಿತರಿದ್ದರು.
ಶರಣ್ಯ ಮತ್ತು ಬಳಗದವರು ಆಶಯ ಗೀತೆ ಹಾಡಿದರು. ಉಪನ್ಯಾಸಕಿಯರಾದ ಸಾವಿತ್ರಿ ಕೆ., ರೇಷ್ಮಾ ಎಂ.ಎಂ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೇಯಾ ನೃತ್ಯ ಸಾದರಪಡಿಸಿದರು. ತೀರ್ಥೇಶ್ ಯಾದವ್ ವೀಕ್ಷಕ ವಿವರಣೆ ನೀಡಿದರು. ಜಿಲ್ಲೆಯ 9 ತಾಲೂಕುಗಳ ಬಾಲಕ ಹಾಗೂ ಬಾಲಕಿಯರ ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದರು.