More

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ‌

    ಕಾರವಾರ: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜನೆಯಾಗಿದ್ದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಉಪ ಸಮಿತಿಗಳನ್ನು ರಚಿಸಿದರು.
    ಜಿಲ್ಲಾಧಿಕಾರಿ ಕಚೇರಿಯಿಂದ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಬೇಕು. ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯುವ ಪ್ರಮುಖ ಸಮಾರಂಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
    ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಕಾರವಾರ ಎಸಿ ಜಯಲಕ್ಷ್ಮಿ ರಾಯಕೋಡ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕಿ ಸ್ಟೆಲಾ ವರ್ಗಿಸ್ ಇದ್ದರು.

    ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ
    ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನವೆಂಬರ್ 1 ರಂದು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಇದು ಎರಡನೇ ವರ್ಷದ ಪ್ರಶಸ್ತಿಯಾಗಿದೆ. ಕಳೆದ ವರ್ಷ ಕೂಡ ಈ ಪ್ರಶಸ್ತಿ ನೀಡಲಾಗಿತ್ತು

    ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜಸೇವೆ, ಶಿಕ್ಷಣ, ಪರಿಸರ ಮತ್ತಿತರ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಗಣ್ಯರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಾಲಾಗಿದೆ.
    ಆಸಕ್ತ ತಮ್ಮ ಸಾಧನೆಗಳ ವಿವರವುಳ್ಳ ಅರ್ಜಿಗಳನ್ನು ಅ.25 ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಮೇಲ್: [email protected]. ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ನಾರಿ ನಿನಗೊಂದು ಸ್ಯಾರಿ ಕುಮಟಾ ಕ್ಷೇತ್ರದ ವಿಜೇತರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts