ಥ್ರೋಬಾಲ್ ಟೂರ್ನಿಯಲ್ಲಿ ಚಾಂಪಿಯನ್

throwball
ಜಿಲ್ಲಾ ಮಟ್ಟದ ಥ್ರೋ ಬಾಲ್ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದ ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ
Published on

ವಿಜಯವಾಣಿ ಸುದ್ದಿಜಾಲ ಶಿರ್ವ

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶಿರ್ವ ಹಿಂದು ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಥ್ರೋಬಾಲ್ ಟೂರ್ನಿಯ ಬಾಲಕರ ವಿಭಾಗದಲ್ಲಿ ಹಿಂದು ಪದವಿ ಪೂರ್ವ ಕಾಲೇಜು ಪ್ರಥಮ ಹಾಗೂ ಕಾರ್ಕಳ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಬ್ರಹ್ಮಾವರ ಎಸ್‌ಎಂಎಸ್ ಪಿಯು ಕಾಲೇಜು ಪ್ರಥಮ ಹಾಗೂ ಹಿಂದು ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ತನ್ನದಾಸಿಕೊಂಡಿತು.

ಗುರುವಾರ ಸಮಾರೋಪ ಸಮಾರಂಭದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ವೈ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು ಪ್ರಾಂಶುಪಾಲ ಡಾ.ಮಿಥುನ್ ಚಕ್ರವರ್ತಿ ಮತ್ತು ಹಿಂದು ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕಿ ಶಕಿಲಾವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿದರು. ಮುಖ್ಯಶಿಕ್ಷಕಿ ವಸಂತಿ, ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಭಾಸ್ಕರ ಎ.ಸ್ವಾಗತಿಸಿದರು. ನವೀನ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net