ಆರೋಗ್ಯ ಉತ್ತಮವಾಗಿದ್ದರೆ ಓದು ಸುಲಲಿತ : ದೈಹಿಕ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಬಣ್ಣನೆ

New Project (18)
Published on

ಗುರುಪುರ: ಆರೋಗ್ಯ ಉತ್ತಮವಾಗಿದ್ದರೆ ಓದು ಉತ್ತಮವಾಗಿರುತ್ತದೆ. ಗುರಿ ಮುಟ್ಟುವ ಹಾದಿಯಲ್ಲಿ ಆರೋಗ್ಯ ಉತ್ತಮವಾಗಿರಿಸಲು ಯೋಗಕ್ಕೆ ಆದ್ಯತೆ ನೀಡಬೇಕು ಎಂದು ಮಂಗಳೂರು ದಕ್ಷಿಣ ವಲಯ ದೈಹಿಕ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಹೇಳಿದರು.

ದ.ಕ.ಜಿಪಂ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಸಹಭಾಗಿತ್ವದಲ್ಲಿ ಶುಕ್ರವಾರ 14 ಮತ್ತು 17ರ ವಯೋಮಿತಿಯ ಬಾಲಕ-ಬಾಲಕಿಯರ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯೋಗ ಶಿಕ್ಷಕ ಗೋಪಾಲಕೃಷ್ಣ ದೇಲಂಪಾಡಿ ಮಾತನಾಡಿ, ಪ್ರಧಾನಿ ಮೋದಿ ಅವರು ವಿಶ್ವ ಯೋಗ ದಿನ ಘೋಷಿಸಿದ ಬಳಿಕ ಜನರಲ್ಲಿ ಯೋಗಾಸಕ್ತಿ ಹೆಚ್ಚಾಗಿದೆ ಎಂದರು.

ಮಂಗಳೂರು ದಕ್ಷಿಣ ವಲಯ ದೈಹಿಕ ಶಿಕ್ಷಣ ಪರಿವೀಕ್ಷಕಿ ಲಿಲ್ಲಿ ಪಾಯಸ್, ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್, ವಿಮಾನ ನಿಲ್ದಾಣ ಪ್ರಾಧಿಕಾರದ ನಿವೃತ್ತ ಅಧಿಕಾರಿ ಸುಂದರ್ ಕೆ.ಮಾತನಾಡಿದರು. ಯೋಗ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಾಕೃಷ್ಣ ಮತ್ತು ನಯನಾ ಕುಮಾರಿ ಅವರನ್ನು ಸನ್ಮಾನಿಸಲಾಯಿತು.

ಶಾಲಾ ಆಡಳಿತ ಮಂಡಳಿ ಸದಸ್ಯ ಉದಯ ಕುಮಾರ್ ಕುಡುಪು, ಎಸ್‌ಡಿಎಂ ಐಟಿಐ ಪ್ರಾಂಶುಪಾಲ ನರೇಂದ್ರ, ಪ್ರೌಢಶಾಲಾ ಮುಖ್ಯಶಿಕ್ಷಕ ರಮೇಶ್ ಆಚಾರ್ಯ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಹರಿಣಾಕ್ಷಿ ಮತ್ತು ವಿಠಲ್ ವಾಗ್ಮೋರೆ, ಗುರುಪುರ ಹೋಬಳಿ ನೋಡಲ್ ಅಧಿಕಾರಿ ಪ್ರಮೋದ್ ಕುಮಾರ್, ಯೋಗ ಶಿಕ್ಷಕರು, ತರಬೇತುದಾರರು, ತೀರ್ಪುಗಾರರು, ಯೋಗ ವಿದ್ಯಾರ್ಥಿಗಳು ಇದ್ದರು.

ಮಂಗಳಜ್ಯೋತಿ ಸಮಗ್ರ ಶಾಲೆ ಆಡಳಿತಾಧಿಕಾರಿ ನರೇಶ್ ಮಲ್ಲಿಗೆಮಾಡು ಸ್ವಾಗತಿಸಿ. ವಿದ್ಯಾರ್ಥಿನಿ ವೈಷ್ಣವಿ ಪ್ರಾರ್ಥಿಸಿದರು. ಆಳ್ವಾಸ್ ಶಾಲೆ ವಿದ್ಯಾರ್ಥಿ ಶಶಿಕುಮಾರ್ ಯೋಗ ಪ್ರದರ್ಶಿಸಿದರು. ಶಿಕ್ಷಕಿ ಪ್ರಸನ್ನಾ ವೈ.ನಿರೂಪಿಸಿ. ತಾಲೂಕು ದೈಹಿಕ ಶಿಕ್ಷಕ ಸಂಘ ಅಧ್ಯಕ್ಷ ಶೇಖರ ಕಡ್ತಲ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net