More

    ನ.27 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

    ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೆಹರು ಯುವ ಕೇಂದ್ರ ಇವರುಗಳ ಸಹಯೋಗದಲ್ಲಿ 2023-24 ನೇ ಸಾಲಿನ ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 27 ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

    ಸ್ಪರ್ಧೆಗಳಲ್ಲಿ 15 ರಿಂದ 29 ವರ್ಷ ವಯೋಮಿತಿಯೊಳಗಿನ ಯುವಕ/ಯುವತಿಯರು, ವಿವಿಧ ಶಾಲಾ/ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೋಂದಾವಣೆಯಾದ ಯುವಕ ಸಂಘಗಳು, ಯುವತಿ ಮಂಡಳಿಗಳ ಪದಾಧಿಕಾರಿಗಳು ಭಾಗವಹಿಸಬಹುದಾಗಿರುತ್ತದೆ.

    ಭಾಗವಹಿಸಲು ಆಸಕ್ತಿ ಇರುವ ಸ್ಪರ್ಧಾಳುಗಳು ನವೆಂಬರ್ 27 ರಂದು ಬೆಳಿಗ್ಗೆ 8.30 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬಹುದು.

    ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದವರು 2023-24 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಪ್ರಶಸ್ತಿ ಮತ್ತು ಫಲಕಗಳನ್ನು ನೀಡಲಾಗುವುದು. ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರು ರಾಷ್ಟ್ರ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬಹುದಾಗಿರುತ್ತದೆ.

    ಭಾಗವಹಿಸುವ ಸ್ಪರ್ಧಾಳುಗಳಿಗೆ ತಗಲುವ ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆಯನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts