More

    ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

    ಧಾರವಾಡ: ಜಿಲ್ಲೆಯಾದ್ಯಂತ ಗುರುವಾರ ಉತ್ತಮ ಮಳೆಯಾಗಿದೆ. ತಹಸೀಲ್ದಾರ್ ಹಾಗೂ ಎಲ್ಲ ಇಲಾಖೆಗಳ ತಾಲೂಕು ಹಾಗೂ ಗ್ರಾಮಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಮಳೆಯಿಂದ ಸಾರ್ವಜನಿಕರಿಗೆ ತೊಂದರೆಯಾದರೆ ತಕ್ಷಣ ಸ್ಪಂದಿಸಿ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ.
    ಪ್ರಕಟಣೆ ನೀಡಿರುವ ಅವರು, ತಹಸೀಲ್ದಾರರು ಹಾಗೂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಮನೆಗಳಿಗೆ ಭಾಗಶಃ ಹಾನಿಯಾದ ವರದಿಯಾಗಿದ್ದು, ಗ್ರಾಮಗಳ ಆಡಳಿತಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಕೇಂದ್ರಸ್ಥಾನ ಬಿಡುವ ಪೂರ್ವದಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆಯಬೇಕು. ಗ್ರಾಮಗಳ ಪ್ರಮುಖ ಕೆರೆ, ಹೊಂಡ, ಹಳ್ಳಗಳ ಬಗ್ಗೆ ಗಮನ ಹರಿಸಿ, ಸುರಕ್ಷತೆಯನ್ನು ಖಾತರಿ ಮಾಡಿಕೊಳ್ಳಬೇಕು. ವಿಶೇಷವಾಗಿ ಅಳ್ನಾವರದ ಇಂದಿರಮ್ಮನ ಕೆರೆ, ತುಪರಿಹಳ್ಳ, ಬೆಣ್ಣೆಹಳ್ಳಗಳ ನೀರಿನ ಹರಿವಿನ ಬಗ್ಗೆ ನಿಗಾ ವಹಿಸಬೇಕು ಎಂದರು.
    ಅತಿ ಮಳೆಯಿಂದ ತೊಂದರೆ ಉಂಟಾದರೆ ಸಾರ್ವಜನಿಕರು ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ತಹಸೀಲ್ದಾರರು ಕೇಂದ್ರಸ್ಥಾನದಲ್ಲಿದ್ದು, ಮಳೆಯಿಂದ ತೊಂದರೆ ಉಂಟಾದಲ್ಲಿ ತಕ್ಷಣ ಸ್ಥಳಕ್ಕೆ ಹೋಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಸಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts