More

    ಕ್ರೀಡೆಯಿಂದ ದೈಹಿಕ, ಮಾನಸಿಕ ಸದೃಢತೆ: ಜಿಲ್ಲಾಧಿಕಾರಿ

    ಉಡುಪಿ: ಕ್ರೀಡೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು-ಗೆಲುವನ್ನು ಸಮಾನವಾಗಿ ಕಾಣಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    ಬುಧವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಪೊಲೀಸ್​ ಇಲಾಖೆ ಉಡುಪಿ ವತಿಯಿಂದ ನಡೆದ ಜಿಲ್ಲಾ ಪೊಲೀಸ್​ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

    ಪೊಲೀಸ್​ ಇಲಾಖೆ ಸಿಬ್ಬಂದಿ ಪ್ರತಿನಿತ್ಯ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಒಂದು ದಿನವನ್ನು ಕ್ರೀಡಾ ಚಟುವಟಿಕೆಗಾಗಿ ಮೀಸಲಿಡುವುದರಿಂದ ಮನೋಲ್ಲಾಸ ಹೆಚ್ಚಿಸುತ್ತದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೊಂದಾಣಿಕೆ ಮನೋಭಾವ ಬರುತ್ತದೆ. ಪ್ರತಿನಿತ್ಯ ಕ್ರಿಯಾಶೀಲರಾಗಿ ಕರ್ತವ್ಯನಿರ್ವಹಿಸಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಜಿಲ್ಲಾ ಪೊಲೀಸ್​ ಅಧೀಕ್ಷಕ ಡಾ. ಅರುಣ್​ ಕೆ ಸ್ವಾಗತಿಸಿ, ಎಎಸ್​ಪಿ ಎಸ್​.ಟಿ ಸಿದ್ದಲಿಂಗಪ್ಪ, ಯೋಗೇಶ ನಾಯ್ಕ ನಿರೂಪಿಸಿ, ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts