More

    ಜಿಲ್ಲೆಯಲ್ಲಿ ರ‌್ಯಾಪಿಡ್ ಆ್ಯಂಟಿಜೆನ್ ಟೆಸ್ಟ ಆರಂಭ

    ಬೆಳಗಾವಿ: ಒಂದೇ ದಿನ 575 ಜನರಿಗೆ ಕರೊನಾ ಸೋಂಕು ಹಾಗೂ ಸಾವಿನ ಸಂಖ್ಯೆ 100ರ ಗಡಿ ದಾಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸೋಂಕಿತರನ್ನು ಪತ್ತೆ ಮಾಡಿ, ಶೀಘ್ರ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವಡಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾಬ್ ಸಂಗ್ರಹ ಹಾಗೂ ರ‌್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಆರಂಭಿಸಲಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಚಾಲನೆ ನೀಡಿದರು.

    ನಂತರ ಅವರು ಮಾತನಾಡಿ, ಜನಸಂದಣಿ ಜಾಸ್ತಿ ಇರುವ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಆಕ್ಸಿಮೀಟರ್ ಮೂಲಕ ಪರೀಕ್ಷಿಸಿ ಆಕ್ಸಿಜನ್ ಪ್ರಮಾಣ 94ಕ್ಕಿಂತಲೂ ಕಡಿಮೆ ಇರುವ ಜನರಿಗೆ ತಕ್ಷಣವೇ ರ‌್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೊನಾ ವ್ಯಾಪಿಸುತ್ತಿದ್ದು, ಸೋಂಕಿತರನ್ನು ಬಹುಬೇಗ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಯಾರೂ ಗಾಬರಿಪಡುವ ಅಗತ್ಯತೆ ಇಲ್ಲ. ಮುನ್ನೆಚ್ಚರಿಕೆಯಿಂದ ಮಾಸ್ಕ್ ಧರಿಸಿ, ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಿ ಎಂದು ಜನತೆಗೆ ಸಲಹೆ ನೀಡಿದರು.ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಮಾತನಾಡಿ, ಸ್ಲಂ ಪ್ರದೇಶ ಮತ್ತು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಲಿದ್ದೇವೆ. ಗರ್ಭಿಣಿಯರು, ವೃದ್ಧರನ್ನು ಪರೀಕ್ಷೆ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ ಎಂದರು. ಟಿಎಚ್‌ಒ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎನ್. ತುಕ್ಕಾರ, ಪಾಲಿಕೆ ಅಧಿಕಾರಿ ಲಕ್ಷ್ಮೀ ನಿಪ್ಪಾಣಿಕರ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts