More

    ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಆಚರಣೆ

    ಉಡುಪಿ: ದೇಶವನ್ನು ಭಯೋತ್ಪಾದನಾ ಮುಕ್ತ ರಾಷ್ಟ್ರವನ್ನಾಗಿಸಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತು ವಾರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು. ಸರ್ಕಾರ ದೇಶದ ಶಾಂತಿ ಸುವ್ಯವಸ್ಥೆಗೆ ಪ್ರಾಶಸ್ತ್ಯ ನೀಡುತ್ತದೆ. ಸರ್ವರಿಗೂ ಸಮಾನತೆ ನೀಡಿದೆ. ದೇಶದ ಅಭಿವೃದ್ಧಿಯನ್ನು ಕೆಲವು ಶಕ್ತಿ ಗಳಗೆ ಸಹಿಸಲು ಸಾಧ್ಯವಾಗದೆ, ವಿಧ್ವಂಸಕ ಕೃತ್ಯ ನಡೆಸುವ ಹುನ್ನಾರ ತೋರುತ್ತಿದೆ. ಇಲ್ಲಿವರೆಗೆ ಇದನ್ನು ಸಮರ್ಥವಾಗಿ ಎದುರಿಸಲಾಗಿದೆ, ಅಂತಹ ಯಾವುದೇ ಕೃತ್ಯಗಳಿಗೆ ಅವಕಾಶ ಇಲ್ಲ ಎಂದರು. ಜಿಲ್ಲೆಯಲ್ಲಿ ನೆರೆ ಹಾನಿ ಹಿನ್ನೆಲೆಯಲ್ಲಿ ಪಂಚಾಯಿತಿ ರಾಜ್ ಇಲಾಖೆಯಿಂದ 29 ಕೋಟಿ ರೂ.ಬಿಡುಗಡೆ ಮಾಡಿದ್ದು, ವಿವಿಧ ಕಾಮಗಾರಿಗಳಿಗಾಗಿ 32 ಕೋಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ 1.90 ಲಕ್ಷ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ 1.39 ಲಕ್ಷ ರೈತರಿಗೆ ಪ್ರೋತ್ಸಾನ ಧನ ನೀಡಲಾಗಿದೆ, ಸಣ್ಣ ನೀರಾವರಿ ಇಲಾಖೆಯಿಂದ 50 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ, ಎಸ್.ಎಫ್.ಸಿ ಅನುದಾನದ ಮೂಲಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ವಾರಾಹಿಯಿಂದ ಉಡುಪಿ ನಗರಕ್ಕೆ 24*7 ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ 157 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ ನಡೆಸಲಾಗಿದೆ ಎಂದರು.
    ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಡುಪಿ ತಾ.ಪಂ.ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ ಸಿಇಒ ಪ್ರೀತಿ ಗೆಹ್ಲೋಟ್, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ, ಕರಾವಳಿ ಕಾವಲು ಪೊಲೀಸ್ ಪಡೆ ಅಧೀಕ್ಷಕ ಚೇತನ್, ಎಎಸ್‌ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಪೌರಾಯುಕ್ತ ಆನಂದ್ ಸಿ. ಕಲ್ಲೋಳಿಕರ್ ಉಪಸ್ಥಿತರಿದ್ದರು.

    ಹೆಲ್ತ್ ಟೂರಿಸಂ, ಮೀನುಗಾರಿಕೆ ಅಭಿವೃದ್ಧಿ: ಕರಾವಳಿಯು ರಾಜ್ಯದ ಅರ್ಥಿಕತೆಗೆ ಹೆಚ್ಚಿನ ಪುಷ್ಠಿ ನೀಡುವ ವಲಯ. ಈ ಪ್ರದೇಶದ ಸಮಗ್ರ ಅಭಿವೃಧ್ದಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಬೊಮ್ಮಾಯಿ ಹೇಳಿದರು. ರಾಜ್ಯದ ಆರ್ಥಿಕತೆಗೆ ಪುಷ್ಠಿ ನೀಡುವ ಕರಾವಳಿಯನ್ನು ಪೂರ್ಣಪ್ರಮಾಣದಲ್ಲಿ ಇದುವರೆಗೂ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಕರಾವಳಿ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಆಮದು, ರಫ್ತು ಪ್ರಮಾಣವನ್ನು ಹೆಚ್ಚು ಮಾಡುವ ಮೂಲಕ ಹಾಗೂ ಒಳನಾಡು ಸಾರಿಗೆ ಮತ್ತು ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು. ಈ ಮೂಲಕ ಪ್ರವಾಸೋದ್ಯವನ್ನು ಬೆಳೆಸಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸಬೇಕು. ಉಡುಪಿಯಲ್ಲಿ ಟೆಂಪಲ್ ಟೂರಿಸಂ ಮತ್ತು ಹೆಲ್ತ್ ಟೂರಿಸಂ ಅಭಿವೃದ್ಧಿಪಡಿಸಬೇಕು. ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ನೀಡುವ ಮೂಲಕ ಮೀನುಗಾರರ ಶ್ರೇಯೋಭಿವೃದ್ಧಿಗೆ ಸರ್ಕಾರ ಮುಂದಾಗಲಿದೆ ಎಂದರು.

    ಸಾಧಕರು, ರೈತರಿಗೆ ಸನ್ಮಾನ: ಜಿಲ್ಲೆಯಲ್ಲಿ ಅತ್ಯುನ್ನತ ಸಾಧನೆ ತೋರಿದ 10 ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಗೌರವಿಸಲಾಯಿತು. ಕೃಷಿ ಪ್ರಶಸ್ತಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪಡೆದ 13 ರೈತರನ್ನು ಸನ್ಮಾನಿಸಲಾಯಿತು. ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳನ್ನು ಬಹುಮಾನ ನೀಡಲಾಯಿತು. ಖೇಲೋ ಇಂಡಿಯಾದಲ್ಲಿ 100 ಮೀಟರ್ ಓಟದಲ್ಲಿ ದಾಖಲೆ ಬರೆದು ಚಿನ್ನ ಗೆದ್ದ ಎಂಜಿಎಂ ಕಾಲೇಜು ವಿದ್ಯಾರ್ಥಿ ಅಭಿನ್ ದೇವಾಡಿಗ ಅವರನ್ನು ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts