

ಮಡಿಕೇರಿ: ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೧.೦೭ ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಸರಾಸರಿ ೦.೨೫ ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ೦.೧೭ ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ೨.೮೦ ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ಹೋಬಳಿವಾರುಗಳಾದ ಭಾಗಮಂಡಲ ೧, ಶ್ರೀಮಂಗಲ ೧, ಸೋಮವಾರಪೇಟೆ ಕಸಬಾ ೫.೪೦, ಶನಿವಾರಸಂತೆ ೨, ಶಾಂತಳ್ಳಿ ೭, ಕೊಡ್ಲಿಪೇಟೆ ೨.೪೦ ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿಗಳಾಗಿದ್ದು, ೨೮೫೮.೧೫ ಅಡಿ ನೀರಿದೆ. ಇಂದಿನ ನೀರಿನ ಒಳಹರಿವು ೨೫೩೯ ಕ್ಯೂಸೆಕ್ ಇದ್ದು, ನೀರಿನ ಹೊರ ಹರಿವು ನದಿಗೆ ೨೦೦೦ ಕ್ಯೂಸೆಕ್ ಇದೆ.