1.25 ಲ ಕ್ಯೂಸೆಕ್​ ನೀರು ಬಿಡುಗಡೆ

1.25 lakh cusec water release
Published on

ಆಲಮಟ್ಟಿ: ಜಲಾಶಯಕ್ಕೆ ಕಳೆದೆರಡು ದಿನಗಳಿಂದ ಒಳಹರಿವು ಹೆಚ್ಚಾಗುತ್ತಿದ್ದರಿಂದ ಹೊರ ಹರಿವಿನ ಪ್ರಮಾಣವನ್ನು 1.25 ಲ ಕ್ಯೂಸೆಕ್​ಗೆ ಹೆಚ್ಚಿಸಲಾಗಿದೆ.

ಗರಿಷ್ಠ 519.60 ಮೀಟರ್​ ಎತ್ತರದಲ್ಲಿ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಸೋಮವಾರ ಸಂಜೆ 519.51 ಮೀಟರ್​ ಎತ್ತದಲ್ಲಿ 121.431 ಟಿಎಂಸಿ ನೀರು ಸಂಗ್ರಹವಾಗಿದೆ.

ಒಳಹರಿವು 87,889 ಕ್ಯೂಸೆಕ್​ ಇದ್ದರೆ ಹೊರಹರಿವು 1,25 ಕ್ಯೂಸೆಕ್​ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿತ್ತು. ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಾಗುತ್ತಿದ್ದರಿಂದ ಕೃಷ್ಣಾ ನದಿಗೆ ಹರಿವು ಉಂಟಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.

ಇದರಿಂದ ಮುಂಜಾಗ್ರತೆ ಕ್ರಮವಾಗಿ ಒಳಹರಿವಿಗಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಆಲಮಟ್ಟಿ ಡ್ಯಾಂನಿಂದ ನದಿ ಪಾತ್ರಕ್ಕೆ ಹರಿಸಲಾಗುತ್ತಿದ್ದರಿಂದ ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಆವರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net