

ಹಾಸನ: ಜಿಲ್ಲೆಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಭೇದಿಸಿ ವಶಪಡಿಸಿಕೊಳ್ಳಲಾಗಿದ್ದ ್ದ 1.27 ಕೋಟಿರೂ. ಮೌಲ್ಯದ ಚಿನ್ನಾಭರಣಗಳನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ವಾರಸುದಾರರಿಗೆ ಹಸ್ತಾಂತರಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಳುವಾಗಿದ್ದ ವಸ್ತುಗಳನ್ನು ವಾರಸುದಾರರಿಗೆ ಹಿಂತಿರುಗಿಸುವ ಕಾರ್ಯಕ್ರಮದದಲ್ಲಿ 2 ಕೆ.ಜಿಗೂ ಅಧಿಕ ಚಿನ್ನಾಭರಣ, 1 ಕೆ.ಜಿಗೂ ಹೆಚ್ಚು ಬೆಳ್ಳಿಯ ವಸ್ತುಗಳನ್ನು ಹಿಂತಿರುಗಿಸಲಾಯಿತು. ಕಳೆದ ಆರು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಗಳಲ್ಲಿ ಪೊಲೀಸರು 82 ಪ್ರಕರಣಗಳನ್ನು ಭೇದಿಸಿ, ಕದ್ದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 32 ಸರಗಳ್ಳತನ, 20 ಮನೆಗಳ್ಳತನ, 30 ಬೈಕ್ ಕಳವು ಪ್ರಕರಣಗಳಿವೆ.
ಇದೇ ವೇಳೆ ಸೈಬರ್ ಕ್ರೈಮ್ ಬಗ್ಗೆ ಜಾಗೃತಿ ಮೂಡಿಸುವ ಸೈಬಲ್ ಲಾಕ್ ಎಂಬ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತಾ ಹಾಜರಿದ್ದರು.