

ಹುಬ್ಬಳ್ಳಿ: ಇಲ್ಲಿಯ ಗೋಕುಲ ರೋಡ್ ಅಕ್ಷಯ ಕಾಲನಿಯ 1.42 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್, ವಿವಿಧ ವಸ್ತು, 15 ಸಾವಿರ ರೂ. ಕಳ್ಳತನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ತೆಲಗಾಂಣ ರಾಜ್ಯದ ಕಾರ್ತಿಕ್ ಅಕ್ಕೇನೇನಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ಕು ಮೊಬೈಲ್ ಫೋನ್, ಹಣ ಸೇರಿ ವಿವಿಧ ವಸ್ತುಗಳನ್ನು ಕಳ್ಳತನ ಮಾಡಿದ್ದಾನೆ ಎಂದು ಮುರುಳಿ ಎಂಬುವರು, ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.