ಕೃಷ್ಣಾ ನದಿಗೆ 1.74 ಲಕ್ಷ ಕ್ಯೂಸೆಕ್ ನೀರು ಶೀಲಹಳ್ಳಿ ಸೇತುವೆ ಮುಳುಗಡೆ

raichur
raichur
Published on

ರಾಯಚೂರು ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮಂಗಳವಾರ ನದಿಗೆ 1.74 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿ ಬಿಡಲಾಗುತ್ತಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ವಾಗುತ್ತಿರುವ ಹಿನ್ನಲೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಜಿಲ್ಲಾಡಳಿತದಿಂದ ಮುನ್ನಚ್ಚರಿಕೆ ಕ್ರಮವಾಗಿ ಸೇತುವೆ ಮೇಲೆ ನದಿಪಾತ್ರದಲ್ಲಿ ಜನ, ಜಾನುವಾರಗಳ ಓಡಾಡದಂತೆ ನಿಷೇಧ ಮಾಡಲಾಗಿದೆ. ಸೇತುವೆಯ ಎರಡು ಕಡೆ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಸೇತುವೆ ಮುಳುಗಡೆಯಿಂದಾಗಿ ನಡುಗಡ್ಡೆ ಪ್ರದೇಶ ಸೇರಿದಂತೆ ಶೀಲಹಳ್ಳಿ, ಹಂಚಿನಾಳ, ಯರಗೋಡಿ ಗ್ರಾಮ ಸೇರಿ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆದ್ದು, ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿಮೀ ಸುತ್ತುವರೆದು ಪ್ರಯಾಣಿಸಬೇಕಿದೆ.

ಪ್ರಸ್ತುತವಾಗಿ ಆಲಮಟ್ಟಿ ಜಲಾಶಯದಿಂದ ಬಸವ ಸಾಗರ ಜಲಾಶಯಕ್ಕೆ 1.80 ಲಕ್ಷ ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನಾರಾಯಣಪುರ ಜಲಾಶಯದಿಂದ 30 ಕ್ರಸ್ಟ್ ಗೇಟ್ ಗಳ ಮೂಲಕ ನೇರವಾಗಿ 1.74,500 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net