

ಶನಿವಾರಸಂತೆ : ಕೊಡ್ಲಿಪೇಟೆ ವಲಯದ ದುಂಡಳ್ಳಿ ಕಾರ್ಯ ಕ್ಷೇತ್ರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನೀಡಿದ 1 ಲಕ್ಷ ರೂ. ಸಹಾಯಧನದ ಡಿಡಿ ಅನ್ನು ಗುರುವಾರ ಹಸ್ತಾಂತರಿಸಲಾಯಿತು.
ಗ್ರಾಮಾಭಿವೃದ್ಧಿ ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸ್ಥಾಪಿಸಿರುವ ಗ್ರಾಮಾಭಿವೃದ್ಧಿ ಸಂಸ್ಥೆಯು ಇಂದು ಹಲವು ಯೋಜನೆಗಳ ಮೂಲಕ ಸರ್ಕಾರದ ಜತೆ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಕೃಷಿಗೆ ಉತ್ತೇಜನ ನೀಡುವ ಜತೆಯಲ್ಲಿ, ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಪರಿಸರದ ಬಗ್ಗೆಯೂ ಕಾಳಜಿಯನ್ನು ಹೊಂದಿದೆ. ಹೀಗಾಗಿ ದೇವಸ್ಥಾನಗಳ ಅಭಿವೃದ್ಧಿಗೆ ಸಹಾಯ ಧನ ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ದೇವಸ್ಥಾನ ಸಮಿತಿ ಅಧ್ಯಕ್ಷ ಯತೀಶ್, ಉಪಾಧ್ಯಕ್ಷ ಪ್ರವೀಣ್, ದುಂಡಳ್ಳಿ ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ರಾಜಣ್ಣ, ಸೇವಾಪ್ರತಿನಿಧಿ ಪ್ರಮೀಳಾ, ದೇವಸ್ಥಾನ ಸಮಿತಿ ಸದಸ್ಯರು, ಪ್ರಗತಿಬಂಧು ಮತ್ತು ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.