

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನ. 13 ಮತ್ತು 14ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಗೆ ಕೆಎಸ್ಸಾಟಿರ್ಸಿಯಿಂದ 1 ಸಾವಿರ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ. ಮೈಸೂರು ರಸ್ತೆಯ ಸೆಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿ ಇನ್ನಿತರ ಕಡೆಗಳಿಗೆ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ ಸೇರಿ ಅಂತಾರಾಜ್ಯ ನಗರಗಳಿಗೆ ವಿಶೇಷ ಬಸ್ ಸಂಚರಿಸಲಿವೆ. ಅದೇ ರೀತಿ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಿಸಲಾಗುತ್ತದೆ.
ಹಬ್ಬದ ಬಳಿಕ ನ.16ರಂದು ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ಇರಲಿದೆ. ಈ ಹೆಚ್ಚುವರಿ ಬಸ್ಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶವಿದ್ದು, ನಿಗಮದ ಜಾಲತಾಣ www.ksrtc.in ಹಾಗೂ ರಾಜ್ಯ ಹಾಗೂ ಹೊರರಾಜ್ಯದ 706 ಬುಕ್ಕಿಂಗ್ ಕೌಂಟರ್ಗಳಲ್ಲಿ ಮುಂಗಡ ಆಸನ ಕಾಯ್ದಿರಿಸಬಹುದು. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೆಟ್ಗಳ ಮೇಲೆ ನಮೂದಿಸಲಾದ ಬಸ್ ನಿಲ್ದಾಣ ಅಥವಾ ಪಿಕ್ ಅಪ್ ಪಾಯಿಂಟ್ ಹೆಸರನ್ನು ಗಮನಿಸುವಂತೆ ತಿಳಿಸಲಾಗಿದೆ.