ಪತ್ನಿಯನ್ನು ಕೊಲೆಗೈದವನಿಗೆ ಏಳು ವರ್ಷಗಳ ಕಠಿಣ ಶಿಕ್ಷೆಯೊಂದಿಗೆ 1 ಸಾವಿರ ರೂ. ದಂಡ

crime-logo
Published on


ಮೈಸೂರು: ಪತ್ನಿಯನ್ನು ಕೊಲೆಗೈದ ಅಪರಾಧಿಗೆ ಮೈಸೂರಿನ ಏಳನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಳು ವರ್ಷಗಳ ಕಠಿಣ ಶಿಕ್ಷೆಯೊಂದಿಗೆ 1 ಸಾವಿರ ರೂ. ದಂಡ ವಿಧಿಸಿದೆ.

ಬನ್ನಿಮಂಟಪದ ನಿವಾಸಿ ರಾಜೇಶ್ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ ತನ್ನ ಪತ್ನಿ ರಾಧಾ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ.

ಈತ ರಾಧಾ ಅವರನ್ನು ವಿವಾಹವಾಗಿದ್ದು, ಆಕೆಯ ಬಗ್ಗೆ ಅನುಮಾನ ಹೊಂದಿದ್ದ. ನಿತ್ಯ ಗಲಾಟೆ ನಡೆಯುತ್ತಿತ್ತು. ಕಳೆದ 2022 ರ ಆಗಸ್ಟ್ 27 ರಂದು ಮನೆಯಲ್ಲಿ ಮಲಗಿದ್ದ ರಾಧಾ ಅವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಎನ್.ಆರ್. ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ರಮೇಶ ಅವರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಕೆ.ನಾಗರಾಜ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net