1 ಕಿಮೀ ಉದ್ದದ ರಾಷ್ಟ್ರಧ್ವಜದೊಂದಿಗೆ ಜಾಥಾ ನಾಳೆ

Capture4
Published on

ಹುಮನಾಬಾದ್: ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ 75ನೇ ಸ್ವಾತಂತೊ್ರೃತ್ಸವ ನಿಮಿತ್ತ ಆಜಾದಿ ಕಾ ಅಮೃತ ಮಹೋತ್ಸವ- ಹರ್ ಘರ್ ತಿರಂಗಾ ಆಚರಣೆಗಾಗಿ ಯುವಕರು ಸೇರಿದಂತೆ ಸಾರ್ವಜನಿಕರಲ್ಲಿ ದೇಶಭಕ್ತಿ ಜಾಗೃತಿ ಮೂಡಿಸಲು ಪಟ್ಟಣದಲ್ಲಿ ಸೋಮವಾರ ಬೆಳಗ್ಗೆ 8ರಿಂದ 10 ಗಂಟೆ ವರೆಗೆ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದೊಂದಿಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ್ ತಿಳಿಸಿದ್ದಾರೆ.

ಜಾಥಾ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಬಸವೇಶ್ವರ ವೃತ್ತ, ಪುರಸಭೆ ಹಳೇ ಕಚೇರಿ, ಛತ್ರಪತಿ ಶಿವಾಜಿ ವೃತ್ತ, ಹಳೇ ತಹಸಿಲ್ ಕಚೇರಿ, ಡಾ.ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ, ಪ್ರವಾಸಿ ಮಂದಿರ ಮಾರ್ಗವಾಗಿ ನೂತನ ತಹಸಿಲ್ ಕಚೇರಿಗೆ ತಲುಪಿ ಮುಕ್ತಾಯಗೊಳ್ಳಲಿದೆ. ಈ ಮಾರ್ಗದಲ್ಲಿನ ಎಲ್ಲ ಅಂಗಡಿಗಳ ಮಾಲೀಕರು, ವ್ಯಾಪಾರಸ್ಥರು, ಸಂಘ-ಸಂಸ್ಥೆಗಳ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ವಿದ್ಯಾಥರ್ಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಜಾಥಾ ಯಶಸ್ವಿಗೊಳಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net