ದಕ್ಷಿಣ ಕನ್ನಡದಲ್ಲಿ 10, ಉಡುಪಿಯಲ್ಲಿ ಮೂವರಿಗೆ ಕೋವಿಡ್

Covid-Test
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 10 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 22 ಮಂದಿ ಸೋಂಕುಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 85 ಸಕ್ರಿಯ ಪ್ರಕರಣಗಳಿವೆ.

ಇನ್ನೊಂದೆಡೆ, ಉಡುಪಿ ಜಿಲ್ಲೆಯಲ್ಲಿ ಸೋಮವಾರ 3 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಓರ್ವ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ಹೋಂ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 110 ಮಂದಿಯನ್ನು ಪರೀಕ್ಷಿಸಲಾಗಿದ್ದು, 4 ಮಂದಿ ಬಿಡುಗಡೆಹೊಂದಿದ್ದಾರೆ. 48 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net