ಜಿಲ್ಲಾಧಿಕಾರಿ ಖಾತೆಯಲ್ಲಿ 10 ಕೋಟಿ

10 crore in the Collector's account
Published on

ಮಡಿಕೇರಿ:

ಬಿಜೆಪಿ ಸÀರ್ಕಾರ ಇದ್ದಾಗಲೇ ಕೊಡವ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ. ನೀಡಲಾಗಿದ್ದು ಡಿಸಿ ಖಾತೆಯಲ್ಲಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಕೊಡವ ಅಭಿವೃದ್ಧಿ ನಿಗಮಕ್ಕೆ ಈ ಹಿಂದಿನ ಬಿಜೆಪಿ ಸÀರ್ಕಾರ ಒಂದು ರೂಪಾಯಿಯ ಅನುದಾನ ಬಿಡುಗಡೆಗೊಳಿಸಿಲ್ಲ ಎಂದು ವಿರಾಜಪೇಟೆಯಲ್ಲಿ ಇತ್ತೀಚೆಗೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾಡಿರುವ ಆರೋಪಕ್ಕೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಶಾಸಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇಂತಹ ಆರೋಪಗಳನ್ನು ಮಾಡುವ ಬದಲು ವಸ್ತು ಸ್ಥಿತಿಯನ್ನು ಜನರಿಗೆ ತಿಳಿಸಲಿ ಎಂದರು.

ಈ ಹಿಂದಿನ ಬಿಜೆಪಿ ಸÀರ್ಕಾರ 2022-23 ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಕೊಡವ ಅಭಿವೃದ್ಧಿ ನಿಗಮಕ್ಕೆ 10ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದ್ದು, ಈ ಅನುದಾನ ಈಗಾಗಲೇ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಈ 10 ಕೋಟಿ ರೂ.ಗಳ ಅನುದಾನದಲ್ಲಿ ಬಾಳಗೋಡುವಿನಲ್ಲಿರುವ ಕೊಡವ ಸಾಂಸ್ಕೃತಿಕ ಸೆಂಟರ್ ಗೆ 6 ಕೋಟಿ ರೂ., ಭಾಗಮಂಡಲದಲ್ಲಿ ಕೊಡವ ಸಮಾಜದ ಸಭಾಭವನ ನಿರ್ಮಾಣಕ್ಕೆ 1 ಕೋಟಿ ರೂ, 30 ಕೊಡವ ಸಮಾಜಗಳಿಗೆ ತಲಾ 10 ಲಕ್ಷ ರೂ.ಗಳಂತೆ 3 ಕೋಟಿ ರೂ.ಗಳ ಅನುದಾನ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ ಎಂದು ಮಾಹಿತಿ ನೀಡಿದರು.

ವಿರಾಜಪೇಟೆ ಸೇರಿದಂತೆ ಕೊಡಗಿನ ಕೆಲವು ಪೋಲಿಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮುಚ್ಚಳಿಕೆ ಬರೆಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದರು, ಇಂತಹದ್ದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದರು.

ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೆಲವು ಕಡೆಗಳಲ್ಲಿ ಕೊರೆಸಲಾದ
ಬೋರ್ ವೆಲ್ ಗಳಲ್ಲಿ ನೀರು ಬಾರದೇ ವಿಫಲಗೊಂಡಿರುವ ಬಗ್ಗೆ ಕೇಳಿಬಂದ ದೂರುಗಳಿಗೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ, ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿರುವ ನೀರಿನ ಟ್ಯಾಂಕ್‌ಗಳಿಗೆ ಜಲಾಶಯ ಮತ್ತು ನದಿಗಳಿಂದ ನೀರು ಪೂರೈಕೆ ಮಾಡುವುದೊಂದೇ ಸಮಸ್ಯೆಗೆ ಪರಿಹಾರ ಎಂದರು.
ಪ್ರಮುಖರಾದ ಯಮುನಾ ಚಂಗಪ್ಪ, ಚಕ್ಕೇರ ಸೂರ್ಯ,ವಿಜಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net