ಮೈಸೂರಿನಲ್ಲಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Ksd_Temple Theft
Published on

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಪ್ರತ್ಯೇಕವಾಗಿ ನಡೆದಿರುವ ಎರಡು ಮನೆಗಳಲ್ಲಿ 10 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ.


ಸಿದ್ಧಾರ್ಥನಗರ ನಿವಾಸಿ ಸುಗುಣ ಅವರ ಮನೆಯಲ್ಲಿ 145 ಗ್ರಾಂ ಚಿನ್ನಾಭರಣ, 2 ಕೆಜಿ ಬೆಳ್ಳಿ ವಸ್ತುಗಳು, 1 ಲಕ್ಷ ರೂ. ನಗದು ಸೇರಿದಂತೆ 7.50 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ.


ಕಳ್ಳರು ಮನೆಯ ತಾರಸಿ ಮೇಲಿನ ಬಾಗಿಲನ್ನು ಮೀಟಿ ಒಳ ನುಗ್ಗಿ ಈ ದುಷ್ಕೃತ್ಯ ಎಸಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಜರ್‌ಬಾದ್ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಮತ್ತೊಂದು ಪ್ರಕರಣದಲ್ಲಿ ಶಕ್ತಿನಗರ ನಿವಾಸಿ ಜೆ.ಮಲ್ಲಿಕಾ ಎಂಬುವವರ ಮನೆಯಲ್ಲಿ 1 ಲಕ್ಷ ರೂ. ನಗದು ಹಾಗೂ 42 ಸಾವಿರ ರೂ. ಮೌಲ್ಯದ ಬಂಗಾರವನ್ನು ಕದ್ದಿದ್ದಾರೆ.


ಇವರು ಎರಡು ತಿಂಗಳ ಹಿಂದೆ ಮನೆಗೆ ಬೀಗ ಹಾಕಿಕೊಂಡು ಬಳ್ಳಾರಿಯಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಸೆ.6ರಂದು ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರರಕಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net