

ಚಿತ್ರದುರ್ಗ: ಕವಾಡಿಗರಹಟ್ಟಿ ದಲಿತ ಕಾಲನಿಗೆ ಶನಿವಾರ ಭೇಟಿ ನೀಡಿದ್ದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಹಾಗೂ ನಗರಸಭೆಯ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಸೇರಿ 10 ಲಕ್ಷ ರೂ.ನ ಬಾಂಡ್ ವಿತರಿಸಿದರು.
ಮೂಲಸೌಕರ್ಯಗಳಿಲ್ಲ ಎಂಬುದಾಗಿ ಗ್ರಾಮಸ್ಥರು ಗಮನಕ್ಕೆ ತಂದಿದ್ದು, ವಸತಿ ಒಳಗೊಂಡು ಅಗತ್ಯ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದೆಲ್ಲೆಡೆ ಶುದ್ಧ ಕುಡಿಯುವ ನೀರು ಪೂರೈಕೆಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.