

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ನಲ್ಲಿ 720 ಅಂಕಗಳ ಪೈಕಿ 710 ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಜ್ವಲ್ ಎಚ್.ಎಂಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ 10 ಲಕ್ಷ ರೂ. ಬಹುಮಾನ ನೀಡಿ ಅಭಿನಂದಿಸಿದರು.
ಪ್ರಜ್ವಲ್ ಎಚ್.ಎಂ, ಪಾಲಕರಾದ ಮರಿಸ್ವಾಮಿ ಎಚ್.ಎಂ, ಸೌಮ್ಯಾ, ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಎಂ, ಆಡಳಿತ ಮಂಡಳಿಯ ಸಹನಾ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ, ಶಾಂತಿರಾಜ್ ಜೈನ್, ಪ್ರಾಧ್ಯಾಪಕರಾದ ಶ್ರೀನಿಧಿ ರಾಜ್, ನಿಶಾ ಪೂಜಾರಿ, ವಿಲ್ಸನ್ ತಳ್ತೊಟ್ಟಿ, ಕೇಶವ್ ರಾವ್, ಡಾ.ಸತ್ಯನಾರಾಯಣ್ ಭಟ್, ಈಶ್ವರ್ ಶರ್ಮಾ, ಜೈಸ ಆಂಟನಿ, ಚಿಗುರು ಪ್ರಕಾಶ್, ಗ್ರಿಷಿನ್ ಡಿಸೋಜ, ಡಾ.ಆಸ್ಟಿನ್ ಡಿಸೋಜ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಾಸ್ ಮತ್ತಿತರ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.