

ಹುಬ್ಬಳ್ಳಿ: ಇಲ್ಲಿನ ಅಶೋಕ ನಗರ ನಿವಾಸಿ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಲ್ಲನಗೌಡ ಬಸನಗೌಡ ಪಾಟೀಲ ಮುನೇನಕೊಪ್ಪ ಅವರು ನಿಧನರಾಗಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ ಕುಟುಂಬದ ಸದಸ್ಯರು, ಬಡ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಕಿಮ್್ಸ ಆಸ್ಪತ್ರೆಗೆ 10 ಲಕ್ಷ ರೂ. ಚೆಕ್ಅನ್ನು ಮಂಗಳವಾರ ಹಸ್ತಾಂತರಿಸಿದರು.
ಡಾ. ಮುನೇನಕೊಪ್ಪ ಅವರ ಪತ್ನಿ ಶೈಲಜಾ ಪಾಟೀಲ ಅವರು ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ಆರ್ಥಿಕ ನೆರವಿನ ಚೆಕ್ ನೀಡಿದರು. ಡಾ. ಚನ್ನಬಸಪ್ಪ ಕೋರಿ, ನೀಲಮ್ಮ ಯಲಿಗಾರ, ಡಾ. ಈಶ್ವರ ಹೊಸಮನಿ, ಡಾ. ಜಿ.ಸಿ. ಪಾಟೀಲ, ಇತರರು ಇದ್ದರು.