

ಹಾವೇರಿ: ತಾಲೂಕಿನ ದೇವಿಹೊಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ 10ಕ್ಕೂ ಅಧಿಕ ವಿದ್ಯಾರ್ಥಿಗಳು ಹೆಜ್ಜೇನು ಕಡಿತಕ್ಕೊಳಗಾಗಿ ಅಸ್ವಸ್ಥರಾದ ಘಟನೆ ಶನಿವಾರ ಸಂಭವಿಸಿದೆ. ಬೆಳಗ್ಗೆ ಶಾಲೆಯ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಶಾಲೆಯ ಪಕ್ಕದಲ್ಲಿದ್ದ ಹೆಜ್ಜೇನು ಗೂಡಿನಿಂದ ಜೇನುನೊಣಗಳು ಹಾರಿಬಂದು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿವೆ. ಜೇನು ಕಡಿತಕ್ಕೊಳಗಾದ 10ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ವಿದ್ಯಾರ್ಥಿಗಳು ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. ಆಸ್ಪತ್ರೆಗೆ ಡಿಎಚ್ಒ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ ಭೇಟಿ ನೀಡಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.