

ಮಡಿಕೇರಿ: ಕೊಡಗು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ೧೦ ಶಿಕ್ಷಕರು ಆಯ್ಕೆಯಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತ್ಯತ್ತಮ ಶಿಕ್ಷಕರ ಪಟ್ಟಿ ಪ್ರಕಟಿಸಲಾಗಿದೆ. ಮಡಿಕೇರಿ ತಾಲೂಕಿನಿಂದ ಕೈಕಾಡು ಸ.ಕಿ.ಪ್ರಾ ಶಾಲೆಯ ಸಹ ಶಿಕ್ಷಕಿ ಬಿ.ಆರ್.ಭಾರತಿ, ಕೆ.ಪಿ.ಬಾಣೆ ಸ.ಹಿ.ಪ್ರಾ ಶಾಲೆಯ ಸಹ ಶಿಕ್ಷಕಿ ಡಿ.ಕೆ.ರೇಖಾಕುಮಾರಿ, ಬಲ್ಲಮಾವಟಿ ನೇತಾಜಿ ಅನುದಾನಿತ ಪ್ರೌಢಶಾಲೆಯ ಸಹ ಶಿಕ್ಷಕ ಮೆಹಬೂಬ್ ಸಾಬ್ ಎನ್.ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ತಾಲೂಕಿನ ಅಂಜನಗೇರಿ ಬೆಟ್ಟಗೇರಿ ಕಿ.ಪ್ರಾ.ಶಾಲೆಯ ಸಹ ಶಿಕ್ಷಕ ಕೆ.ಎಲ್.ಉದಯ್‌ಕುಮಾರ್, ನ್ಯಾಯದಹಳ್ಳ ಸ.ಹಿ.ಪ್ರಾ ಶಾಲೆಯ ಸಹ ಶಿಕ್ಷಕಿ ಮಂಜುಳಾಮಣಿ, ಗೌಡಳ್ಳಿ ಪ್ರೌಢಶಾಲೆಯ ಸಹ ಶಿಕ್ಷಕ ಬಿ.ಬಿ.ದಿನೇಶ್ ಹಾಗೂ ವೀರಾಜಪೇಟೆ ತಾಲೂಕಿನ ಬೈರಂಬಾಡ ಸ.ಕಿ.ಪ್ರಾ ಶಾಲೆಯ ಸಹ ಶಿಕ್ಷಕಿ ಎಚ್.ಎನ್.ಪದ್ಮ, ಚೂರಿಕಾಡು ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಬಿ.ಕೆ.ಜಯಲಕ್ಷ್ಮಿ, ಒಂಟಿಯಂಗಡಿ ಸ.ಮಾ.ಪ್ರಾ. ಶಾಲೆಯ ಸಹ ಶಿಕ್ಷಕ ಎ.ವಿ.ಮಂಜುನಾಥ್ ಹಾಗೂ ಬಿಳುಗುಂದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಎಚ್.ಜಿ.ಸಾವಿತ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ತಿಳಿಸಿದ್ದಾರೆ.
ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸೆ೫ ರಂದು ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.