ಲೈಂಗಿಕ ದೌರ್ಜನ್ಯ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

judgment new
Published on

ಮೈಸೂರು: ಬುದ್ಧಿಮಾಂದ್ಯ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.


ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ವಾಸಿ ಕುಮಾರ್ (47) ಶಿಕ್ಷೆಗೆ ಗುರಿಯಾದ ಅಪರಾಧಿ. 2022ರ ಏಪ್ರಿಲ್ 27ರಂದು 19 ವರ್ಷದ ಬುದ್ಧಿಮಾಂದ್ಯ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು.

ಈ ಸಂದರ್ಭದಲ್ಲಿ ಈತ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರು ಆಧರಿಸಿ ಬೈಲಕುಪ್ಪೆ ಠಾಣೆ ಪೊಲೀಸರು, ಪ್ರಕರಣ ದಾಖಸಿಕೊಂಡು ಆರೋಪಿ ವಿರುದ್ಧ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಿದ್ದರು.


ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ರಮೇಶ ಅವರು ಕುಮಾರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆಯೊಂದಿಗೆ 50 ಸಾವಿರ ರೂ. ದಂಡವನ್ನೂ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕೆ.ನಾಗರಾಜ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net