10 ರೂ. ನಾಣ್ಯ ಚಲಾವಣೆ ಅಬಾಧಿತ

Published on

ಚಾಮರಾಜನಗರ: ಜಿಲ್ಲೆಯ ಸಾರ್ವಜನಿಕರು ದಿನನಿತ್ಯದ ವಹಿವಾಟುಗಳಲ್ಲಿ 10 ರೂ. ನಾಣ್ಯಗಳನ್ನು ಬಳಸಬೇಕು. ಈ ಸಂಬಂಧ ಇರುವ ಆಧಾರ ರಹಿತ ವದಂತಿಗಳಿಗೆ ಕಿವಿಗೊಡಬಾರದೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮನವಿ ಮಾಡಿದ್ದಾರೆ.

10 ರೂ. ಬೆಲೆಯ ನಕಲಿ ನಾಣ್ಯಗಳು ಚಾಲ್ತಿಯಲ್ಲಿವೆ ಎಂಬ ವದಂತಿಗಳು ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ತಪ್ಪು ಮಾಹಿತಿಯಿಂದಾಗಿ ಜನಸಾಮಾನ್ಯರು 10 ರೂ. ನಾಣ್ಯ ಸ್ವೀಕರಿಸಲು ಹಿಂಜರಿಯುತ್ತಿರುವುದು ಗಮನಕ್ಕೆ ಬಂದಿದೆ. 10 ರೂ. ನಾಣ್ಯವು ರಿಸರ್ವ್ ಬ್ಯಾಂಕ್ ನೀಡಿದ ಕಾನೂನು ಬದ್ಧ ಮತ್ತು ದೇಶಾದ್ಯಂತ ಬಳಕೆಗೆ ಮಾನ್ಯವಾಗಿರುತ್ತದೆ ಎಂದು ಸ್ಪಷ್ಟ ಪಡಿಸುತ್ತಿದ್ದೇವೆ. ಎಲ್ಲ ರಾಜ್ಯಗಳಲ್ಲಿ ದೈನಂದಿನ ವಹಿವಾಟುಗಳಲ್ಲಿ ಈ ನಾಣ್ಯವನ್ನು ಸ್ವೀಕರಿಸಲಾಗುತ್ತಿದೆ ಮತ್ತು ಬಳಸಲಾಗುತ್ತಿದೆ. ಸಾರ್ವಜನಿಕರು ದಿನನಿತ್ಯದ ವಹಿವಾಟುಗಳಲ್ಲಿ 10 ರೂ. ನಾಣ್ಯ ಬಳಕೆ ಮುಂದುವರಿಸಬೇಕು. ಸಾಮಾನ್ಯ ಆರ್ಥಿಕ ಚಟುವಟಿಕೆ ಅಡ್ಡಿಪಡಿಸುವ ಆಧಾರ ರಹಿತ ವದಂತಿಗಳಿಗೆ ಕಿವಿಗೊಡಬಾರದು. ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್, ಆಟೋ ಚಾಲಕರು, ಹೋಟೆಲ್, ರೆಸ್ಟೋರೆಂಟ್, ಇಂದಿರಾ ಕ್ಯಾಂಟೀನ್, ಆಸ್ಪತ್ರೆ, ಮೆಡಿಕಲ್ ಶಾಪ್, ಚಿತ್ರಮಂದಿರ, ಬೀದಿ ವ್ಯಾಪಾರಿಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಸಂಬಂಧಿತ ಸಂಸ್ಥೆಗಳು 10 ರೂ. ನಾಣ್ಯವನ್ನು ಸ್ವೀಕರಿಸಬೇಕು ಮತ್ತು ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net