10 ಲೀ. ಕಳ್ಳಬಟ್ಟಿ ಮದ್ಯ ವಶ

11hnr1
Published on

ಹೊನ್ನಾವರ: ತಾಲೂಕಿನ ಉಪ್ಪೋಣಿ ಗ್ರಾಮದಲ್ಲಿ ಕಳ್ಳಬಟ್ಟಿ ಮದ್ಯ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಬುಧವಾರ ಕಾರ್ಯಾಚರಣೆ ನಡೆಸಿದ ಇಲ್ಲಿನ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಉಪ್ಪೋಣಿ ಗ್ರಾಮದ ಹೆಬ್ಬಾಳದ ರವಿ ಗೋವಿಂದ ನಾಯ್ಕ ಅವರಿಗೆ ಸೇರಿದ ತೋಟದಲ್ಲಿ ಸಂಗ್ರಹಿಸಿಟ್ಟಿದ್ದ 10 ಲೀ. ಕಳ್ಳಬಟ್ಟಿ ಮದ್ಯ ವಶಕ್ಕೆ ಪಡೆದಿದ್ದಾರೆ. ಮಾಹಿತಿ ಪಡೆದ ಅಧಿಕಾರಿ ದಾಮೋದರ ನಾಯ್ಕ, ಸಿಬ್ಬಂದಿ ಡಿ.ಬಿ. ತಳೇಕರ್, ಸಯ್ಯದ್ ಹಮೀದ್ ಹಾಗೂ ಇತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net