

ಗಂಗೊಳ್ಳಿ: ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾಗಿ 100 ಕೋಟಿ ರೂ. ನಷ್ಟವಾಗಿದ್ದು ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜತೆ ಮಾತನಾಡಿ ಹೆಚ್ಚಿನ ಪರಿಹಾರ ದೊರಕಿಸಿಕೊಡಲು ಯತ್ನಿಸುತ್ತೇನೆ ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಹೇಳಿದರು.
ಬುಧವಾರ ಕುಂದಾಪುರ, ಬೈಂದೂರು ತಾಲೂಕಿನ ವಿವಿಧೆಡೆ ಮಳೆಹಾನಿ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಿ ಕುಂದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಾಡಿಕೆಗಿಂತ ಹೆಚ್ಚಿನ ಮಳೆಯಾಗಿ ಪ್ರಕೃತಿ ವಿಕೋಪ ಸಂಭವಿಸಿದೆ. ರಾಜ್ಯದಲ್ಲಿ ಉಂಟಾದ ನಷ್ಟ ಭರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ತಾತ್ಕಾಲಿಕ ತುರ್ತು ಪರಿಹಾರಕ್ಕೆ ಅಗತ್ಯ ಮೊತ್ತ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಪ್ರಾಕೃತಿಕ ವಿಕೋಪ ಖಾತೆಯಲ್ಲಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ವಕ್ತಾರ ವಿಕಾಸ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಕುಂದಾಪುರ, ಪ್ರದೀಪ್‌ಕುಮಾರ್ ಶೆಟ್ಟಿ ಗುಡಿಬೆಟ್ಟು, ಅರವಿಂದ ಪೂಜಾರಿ ಬೈಂದೂರು, ಶಂಕರ್ ಕುಂದರ್ ಕೋಟ, ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮುಖಂಡರಾದ ಎಸ್.ರಾಜು ಪೂಜಾರಿ, ಎಂ.ದಿನೇಶ್ ಹೆಗ್ಡೆ, ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ದೇವಕಿ ಸಣ್ಣಯ್ಯ, ಉದಯ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಅಶೋಕ್ ಪೂಜಾರಿ ಬೀಜಾಡಿ, ಚಂದ್ರ ಅಮೀನ್, ವಿಶ್ವಾಸ್ ಶೆಟ್ಟಿ, ಕೃಷ್ಣ ಪೂಜಾರಿ, ಇಚ್ಛಿತಾರ್ಥ ಶೆಟ್ಟಿ, ರೋಶನ್ ಶೆಟ್ಟಿ ಉಪಸ್ಥಿತರಿದ್ದರು.