

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಅನಿಕೇತನ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.
ಪರೀಕ್ಷೆ ಬರೆದ 20 ವಿದ್ಯಾರ್ಥಿಗಳಲ್ಲಿ ಆರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹನ್ನೆರಡು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ದ್ವಿತೀಯ ಮತ್ತು ತೃತೀಯ ದರ್ಜೆಯಲ್ಲಿ ತಲಾ ಒಬ್ಬರು ಉತ್ತೀರ್ಣರಾಗಿದ್ದಾರೆ.
ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅರ್ಪಿತಾ 549 ಅಂಕ, ಮಹದೇವ ನಾಯ್ಕ 529 ಹಾಗೂ ಕಲಾ ವಿಭಾಗದಲ್ಲಿ ಮೇಘನಾ 512 ಅಂಕ, ದೀಕ್ಷಿತಾ 510 ಅಂಕ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಇತ್ತೀಚೆಗೆ ಅಭಿನಂದಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಡಾ.ಜೆ.ಸೋಮಣ್ಣ, ಪ್ರಾಂಶುಪಾಲ ಬಸವರಾಜು, ಉಪನ್ಯಾಸಕರಾದ ಲೋಕೇಶ್, ಅಭಿಜಿತ್, ಮಹಾದೇವ ಪ್ರಸಾದ್, ಚೇತನ್, ಶಿವನಂಜು ಇದ್ದರು.