

ಪಿರಿಯಾಪಟ್ಟಣ: ಸಿಬಿಎಸ್‌ಸಿ 10ನೇ ತರಗತಿ ಫಲಿತಾಂಶದಲ್ಲಿ ಪಟ್ಟಣದ ಪುಷ್ಪ ಆಂಗ್ಲ ಮಾಧ್ಯಮ ಶಾಲೆ ಶೇ.100 ರಷ್ಟು ಫಲಿತಾಂಶ ಪಡೆದಿದೆ.
ಶಾಲೆಯ 39 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅವರಲ್ಲಿ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 11 ವಿದ್ಯಾರ್ಥಿಗಳು ಪ್ರಥಮ ದರ್ಜೆ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶಾಲೆಗೆ ಶೇಕಡ 100 ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿನಿ ನಕ್ಷತ್ರಾ ಪಿ.ಗೌಡ 500 ಅಂಕಗಳಿಗೆ 477 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಲಿಖಿತ್ ಬಿ.ಕಿಲ್ಲೆದಾರ್ 469 ಮತ್ತು ಕೌಶಲ್ ಕೆ.468 ಅಂಕಗಳನ್ನು ಗಳಿಸಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.