ಕಳವಾಗಿದ್ದ 100 ಮೊಬೈಲ್‌ಗಳ ಪತ್ತೆ

mobile using hand
Published on

ಮೈಸೂರು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಎರಡು ತಿಂಗಳ ಅವಧಿಯಲ್ಲಿ ವರದಿಯಾಗಿದ್ದ ಮೊಬೈಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಸೆನ್ ಠಾಣೆಯ ವಿಶೇಷ ತಂಡ 18 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 100 ಮೊಬೈಲ್‌ಗಳನ್ನು ಪತ್ತೆ ಹಚ್ಚಿದೆ.


ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು, ಸೆನ್ ಠಾಣೆಯ ಇನ್ಸ್‌ಪೆಕ್ಟರ್ ಪುರುಷೋತ್ತಮ್ ಅವರನ್ನು ಒಳಗೊಂಡ ವಿಶೇಷ ತಂಡಕ್ಕೆ ಸಿಇಐಆರ್ ಪೋರ್ಟಲ್ ಮುಖಾಂತರ ಪತ್ತೆ ಮಾಡುವಂತೆ ಸೂಚಿಸಿದ್ದರು.

ಅದರಂತೆ, 18 ಲಕ್ಷ ರೂ. ವೌಲ್ಯದ ವಿವಿಧ ಕಂಪನಿಯ 100 ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿ ವಾರಸುದಾರರಿಗೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net