100 ಬಡ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಉಚಿತ

Mahesh Rampure
Published on

ಬೀದರ್: ತಾಲ್ಲೂಕಿನ ಹಮಿಲಾಪುರದ ವಿ.ಎಂ. ರಾಂಪುರೆ ಪಬ್ಲಿಕ್ ಸ್ಕೂಲ್ ಪ್ರಸಕ್ತ ಸಾಲಿನಲ್ಲಿ 100 ಬಡ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಉಚಿತ ವಿತರಿಸುವುದಾಗಿ ಘೋಷಿಸಿದೆ.
ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಆರ್ಥಿಕ ಹೊರೆ ಒಂದಿಷ್ಟು ಕಡಿಮೆ ಮಾಡಲು ಉಚಿತವಾಗಿ ಪಠ್ಯಪುಸ್ತಕ ವಿತರಿಸಲು ನಿರ್ಧರಿಸಲಾಗಿದೆ ಎಂದು ಶಾಲೆಯ ಅಧ್ಯಕ್ಷ ಮಹೇಶ ಎಸ್. ರಾಂಪುರೆ ತಿಳಿಸಿದ್ದಾರೆ.
ಹಮಿಲಾಪುರದ ಮುಖ್ಯಶಾಖೆ ಹಾಗೂ ಬೀದರ್‍ನ ಕೆ.ಎಚ್.ಬಿ. ಕಾಲೊನಿ ಶಾಖೆಯ ನರ್ಸರಿಯಿಂದ ಐದನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಉಚಿತವಾಗಿ ಕೊಡಲಾಗುವುದು ಎಂದು ಹೇಳಿದ್ದಾರೆ.
ಶಾಲೆ ಶಿಕ್ಷಣದ ಜತೆಗೆ ಸಾಮಾಜಿಕ ಹೊಣೆಗಾರಿಕೆಯನ್ನೂ ನಿಭಾಯಿಸುತ್ತ ಬಂದಿದೆ. ಕೋವಿಡ್‍ನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಿದೆ. ಪ್ರತಿ ವರ್ಷ ಅನೇಕ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುತ್ತಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net