100 ಮೀ. ಹರ್ಡ್‌ಲ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

CTD prathyusha------
Published on

ಚಿತ್ರದುರ್ಗ: ಶಿಕ್ಷಣ ಇಲಾಖೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲೂಕಿನ ಗೂಳಯ್ಯನಹಟ್ಟಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತ್ಯುಷ ಬಾಲಕಿಯರ ವಿಭಾಗದ 100 ಮೀ. ಹರ್ಡ್‌ಲ್ಸ್‌ನಲ್ಲಿ ಪ್ರಥಮ, 400 ಮೀ. ಹರ್ಡ್‌ಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಸಿ ಮೆಹಬೂಬ್ ಜೀಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆ ಪ್ರಾಚಾರ್ಯ ಎನ್. ಮಂಜುನಾಥ ರೆಡ್ಡಿ ಮತ್ತಿತರರು ವಿದ್ಯಾರ್ಥಿ ಸಾಧನೆ ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net