

ಬೆಳಗಾವಿ: ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಅಗತ್ಯವಿರುವ ಶಿಕ್ಷಣ, ಸೇವೆ ಮತ್ತು ಸಂಶೋಧನೆಗಳಿಗೆ ಉದ್ದೇಶಿತ “ಕ್ವಿನ್ ಸಿಟಿ'ಯಲ್ಲಿ ಮುಂದಿನ 5 ವರ್ಷಗಳಲ್ಲಿ 1,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಕೆಎಲ್‌ಇ ಸಂಸ್ಥೆ ಪ್ರಕಟಿಸಿದೆ.
ಜಿಮ್-2025' ಸಮಾವೇಶದಲ್ಲಿ ಸರ್ಕಾರದ ಪರವಾಗಿ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಕೆಎಲ್‌ಇ ಸಂಸ್ಥೆಯ
ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಈ ಸಂಬಂಧದ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.
ಈ ಹೂಡಿಕೆ ಯೋಜನೆಯಿಂದ 1,500 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಇದು ಕ್ವಿನ್ ಸಿಟಿಗೆ ಘೋಷಣೆಯಾಗಿರುವ ಪ್ರಪ್ರಥಮ ಹೂಡಿಕೆಯಾಗಿದೆ.
ಉಳಿದಂತೆ ಸವದತ್ತಿಯ ಶಿವಶಕ್ತಿ ಶುಗರ್ಸ್ ಹಾಗೂ ಇನಾಂದಾರ್ ಶುಗರ್ಸ್ ಕಾರ್ಖಾನೆಗಳು ಸಕ್ಕರೆ ಮತ್ತು ಎಥೆನಾಲ್ ಉತ್ಪಾದನೆಗೆ ಮುಂದಿನ 2 ವರ್ಷಗಳಲ್ಲಿ ಕ್ರಮವಾಗಿ 1,000 ಕೋಟಿ ರೂ. ಮತ್ತು 250 ಕೋಟಿ ರೂ. ಹೂಡಿಕೆ ಮಾಡಲಿವೆ ಎಂದು ತಿಳಿಸಲಾಗಿದೆ.