1,01,584 ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರ

5 Dwd 6 Divya prabhu
Published on

ಧಾರವಾಡ: ಮುಂಗಾರು ವಿಫಲತೆಯಾಗಿದ್ದರಿಂದ ಜಿಲ್ಲೆಯ ೧,೦೧,೫೮೪ ರೈತರಿಗೆ ೨೦೦೦ ರೂಪಾಯಿಯಂತೆ ೧೯.೮೨ ಕೋಟಿ ರೂಪಾಯಿ ಮಧ್ಯಂತರ ಬೆಳೆ ಹಾನಿ ಪರಿಹಾರ ಜಮೆ ಆಗಿದೆ. ಬಾಕಿ ಉಳಿದ ರೈತರಿಗೆ ಹಂತಹAತವಾಗಿ ಪರಿಹಾರ ಜಮೆ ಮಾಡಲಾಗುತ್ತಿದೆ ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದರು.
ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ಮಂಗಳವಾರ ಜರುಗಿದ ವಿಡಿಯೋ ಸಂವಾದದಲ್ಲಿ ತಮ್ಮ ಕಚೇರಿಯಿಂದ ಪಾಲ್ಗೊಂಡಿದ್ದ ಜಿಲ್ಲಾಽಕಾರಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸಮರ್ಥವಾಗಿ ಬರ ನಿರ್ವಹಣೆ ಮಾಡಿ, ಸಾರ್ವಜನಿಕರಿಗೆ ತೊಂದರೆಯಾಗದAತೆ ಸೂಕ್ತ ಕ್ರಮ ವಹಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆ ನಡೆಸಲಾಗಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಸುಮಾರು ೨೪ ಟಾಸ್ಕ್ಪೋರ್ಸ್ ಸಭೆಗಳನ್ನು ಜರುಗಿಸಿ, ಆಯಾ ತಾಲೂಕಿನ ಬರ ಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು
ಗ್ರಾಮೀಣ ಭಾಗದ ಸುಮಾರು ೧೫೩ ಗ್ರಾಮಗಳಲ್ಲಿ ಮೇ ಅಂತ್ಯದವರೆಗೆ ಕುಡಿಯುವ ನೀರು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ. ಟ್ಯಾಂಕರ್ ನೀರು ಸರಬರಾಜು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಕ್ಕೆ ಟ್ಯಾಂಕರ್ ನೀರು, ಧಾರವಾಡ ತಾಲೂಕಿನ ಹೊಸಟ್ಟಿ, ಬೇಲೂರ, ಮುಗದ ಮತ್ತು ನಿಗದಿ ಗ್ರಾಮಗಳಿಗೆ ಖಾಸಗಿ ಬೋರವೆಲ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಹಾಗೂ ಇತರ ಇಲಾಖೆಗಳ ಅಽಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net