ಧಾರವಾಡ ಜಿಲ್ಲೆಯಲ್ಲಿ ಮತ್ತೆ 102 ಶಂಕಿತರು ಪತ್ತೆ

corona
Published on

ಧಾರವಾಡ: ಜಿಲ್ಲೆಯಲ್ಲಿ ದಿನೇ ದಿನೇ ಕರೊನಾ ಶಂಕಿತ ಸೋಂಕಿತರ ಸಂಖ್ಯೆ ಏರುತ್ತಿದ್ದರೂ ಬಹುತೇಕ ವರದಿಗಳು ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಜನರು ನಿಟ್ಟುಸಿರುವ ಬಿಡುವಂತಾಗಿದೆ.

ಮಂಗಳವಾರ ಸಂಜೆಯಿಂದ 24 ಗಂಟೆ ಅವಧಿಯಲ್ಲಿ 102 ಶಂಕಿತ ಸೋಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಂಗಳವಾರ ಇದ್ದ (ಒಟ್ಟು) 1736 ಶಂಕಿತರ ಸಂಖ್ಯೆ ಬುಧವಾರ 1838ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 1347 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 1193 ಜನರ ವರದಿ ನೆಗೆಟಿವ್ ಬಂದಿವೆ. 7 ಪ್ರಕರಣಗಳಲ್ಲಿ ಪಾಸಿಟಿವ್ ಕಂಡು ಬಂದಿದ್ದು, 6 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ 148 ವರದಿ ಬರಬೇಕಿದೆ. ಮಂಗಳವಾರ ಬಾಕಿ ಇದ್ದ 337 ವರದಿ ಪೈಕಿ 291 ನೆಗೆಟಿವ್ ಬಂದಿವೆ.

ವೈರಸ್ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 1838 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 1114 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡ್​ಗಳಲ್ಲಿ 10 ಜನ ದಾಖಲಾಗಿದ್ದಾರೆ. 30 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 684 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net