

ಕುಂದಾಪುರ: ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಒಟ್ಟು 107 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಶಿಬಿರ ಉದ್ಘಾಟಿಸಿದರು. ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ ಹಾಗೂ ಮಾಜಿ ಅಧ್ಯಕ್ಷ ಎಂ.ಎಂ. ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಹರೆಗೋಡು ಮಹಾವಿಷ್ಣು ಯುವಕ ಮಂಡಲ ಅಧ್ಯಕ್ಷ ದೀಪಕ್ ರಾಜ್, ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಸಮರ ಶೆಟ್ಟಿ, ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ಪ್ರಧಾನ ಕಾರ್ಯದರ್ಶಿ ರವೀಂದ ಪುತ್ರನ್, ಹೆಮ್ಮಾಡಿ ಘಟಕದ ಉಸ್ತುವಾರಿ ರವೀಶ್ ಕೊರವಾಡಿ, ಕೆ ಎಂ. ಸಿ ರಕ್ತ ನಿಧಿ ವಿಭಾಗದ ವೈದ್ಯೆ ಡಾ. ನವಮಿ, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲಾ ಜಿ. ಚಂದನ್ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಲೋಹಿತಾಶ್ವ ಆರ್. ಕುಂದರ್ ಸ್ವಾಗತಿಸಿದರು. ಕಾರ್ಯದರ್ಶಿ ಜಗದೀಶ್ ನೆಂಪು ವಂದಿಸಿದರು. ಉಪಾಧ್ಯಕ್ಷ ಪ್ರವೀಣ್ ಮೊಗವೀರ ಗಂಗೊಳ್ಳಿ ನಿರೂಪಿಸಿದರು.