

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಈಗಾಗಲೇ ಹತ್ತು ಹಂತಗಳಲ್ಲಿ ಒಟ್ಟು 1.06,707 ರೈತರಿಗೆ 108.12 ಕೋಟಿ ರೂ. ಇನಪುಟ್ ಸಬ್ಸಿಡಿ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆ ಸಮೀೆ ದತ್ತಾಂಶದ ಮಾಹಿತಿ ಆಧಾರದಲ್ಲಿ ್ರುಟ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶ ಮೂಲಕ ಹಂತ ಹಂತವಾಗಿ ಪರಿಹಾರ ವಿತರಿಸಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡಲಾಗಿದೆ. ಉಳಿದ ಅರ್ಹ ರೈತರಿಗೆ ಪಾವತಿಸುವ ಕಾರ್ಯವು ಪ್ರಗತಿ ಹಂತದಲ್ಲಿದ್ದು, ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿ ಪಟ್ಟಿಯನ್ನು ನಾಡ ಕಚೇರಿ, ಗ್ರಾಪಂಗಳು, ರೈತ ಸಂಪರ್ಕ ಕೇಂದ್ರ ಹಾಗೂ ತಹಸೀಲ್ದಾರ ಕಚೇರಿಗಳ ಸೂಚನಾ ಲಕದಲ್ಲಿ ಪ್ರಚುರಪಡಿಸಲಾಗಿದೆ. ಬೆಳೆ ಹಾನಿ ಪರಿಹಾರ ಪಡೆಯಲು ್ರುಟ್ ಐಡಿ ಕಡ್ಡಾಯ. ಈವರೆಗೆ ಐಟಿ ಮಾಡಿಸಿಕೊಳ್ಳದ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಐಡಿ ಸೃಜಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ, ತೊಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿ, ತಾಲೂಕುಗಳ ತಹಸೀಲ್ದಾರ ಕಚೇರಿ ಸಂಪಕಿರ್ಸಿ ಬೆಳೆ ಪರಿಹಾರ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.