ಮೈಸೂರಿನಲ್ಲಿ 108 ಸಾಮೂಹಿಕ ಸೂರ್ಯ ನಮಸ್ಕಾರ

yoga
Published on

ಮೈಸೂರು: ಮೈಸೂರು ಯೋಗ ಒಕ್ಕೂಟ ವತಿಯಿಂದ ರಥಸಪ್ತಮಿ ಅಂಗವಾಗಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಬೆಳಗ್ಗೆ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.

ಸೂರ್ಯ ನಮಸ್ಕಾರದಲ್ಲಿ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯೋಗಪಟುಗಳು, ಪಾಲಕರು ಪಾಲ್ಗೊಂಡಿದ್ದರು. ಬೆಳಗ್ಗೆ 5.45 ರಿಂದ 6.45ರವರೆಗೆ 108 ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಲಾಯಿತು. ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಸೂರ್ಯ ನಮಸ್ಕಾರಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಡಾ.ಎ.ಎಸ್. ಚಂದ್ರಶೇಖರ್, ಅಧ್ಯಕ್ಷ ಟಿ. ಜಲೇಂದ್ರ ಕುಮಾರ್, ಕಾರ್ಯಾಧ್ಯಕ್ಷರಾದ ಬಿ. ಶಾಂತರಾಮ್, ಡಾ.ಬಿ.ಪಿ. ಮೂರ್ತಿ, ಉಪಾಧ್ಯಕ್ಷರಾದ ಎಂ.ಎಸ್. ರಮೇಶ್ ಕುಮಾರ್, ಎಂ.ಎಸ್. ಶಿವಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ. ದೇವರಾಜ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net