

ಬಸವನಬಾಗೇವಾಡಿ: ಪಟ್ಟಣದಲ್ಲಿ ಬೀದಿ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ನೇತೃತ್ವದಲ್ಲಿ ಬುಧುವಾರ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ದೇಶದಲ್ಲಿ ಹೆಚ್ಚುತ್ತಿರುವ ಕರೊನಾ ಮಹಾಮಾರಿ ವಿರುದ್ಧ ಹೋರಾಡಲು ಸಾರ್ವಜನಿಕರು ಪರಸ್ಪರ ಅಂತರ ಕಾಪಾಡುವ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅನಾವಶ್ಯಕವಾಗಿ ಹೊರಗಡೆ ಹೋಗುವುದನ್ನು ನಿಲ್ಲಿಸಬೇಕು. ಇದರಿಂದ ನಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳುವ ಮೂಲಕ ನಮ್ಮ ಕುಟುಂಬದ ರಕ್ಷಣೆ ಮಾಡುವ ಜವಾಬ್ದಾರಿ ನಾಗರಿಕರ ಮೇಲಿದೆ ಎಂದರು.
ಇಂಗಳೇಶ್ವರ ನಾಕಾ, ಬಸವೇಶ್ವರ ವೃತ್ತ ಹಾಗೂ ಬಸ್ ನಿಲ್ದಾಣದವರೆಗೆ ಸಂಚರಿಸಿ ಬೀದಿ ವ್ಯಾಪಾರಿಗಳಿಗೆ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಲಾಯಿತು. ಪಿಎಸ್‌ಐ ಚಂದ್ರಶೇಖರ ಹೆರಕಲ್, ರಾಷ್ಟ್ರೀಯ ಬಸವ ಸೈನ್ಯದ ತಾಲೂಕು ಅಧ್ಯಕ್ಷ ಸಂಜು ಬಿರಾದಾರ, ಎಪಿಎಂಸಿ ಅಧ್ಯಕ್ಷ ಶೇಖರ ಗೊಳಸಂಗಿ, ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಸುನೀಲ ಚಿಕ್ಕೊಂಡ, ಮನ್ನಾನ ಶಾಬಾದಿ, ತಾಲೂಕು ಸಂಚಾಲಕ ಗುರುರಾಜ್ ವಂದಾಲ, ಮಲ್ಲು ಅಸ್ಕಿ, ವೀರೇಶ ಗಬ್ಬೂರ, ಮಹಾಂತೇಶ ಹಿರೇಮಠ, ಮುತ್ತು ರಾಂಪೂರ, ರಫಿಕ್ ಸಾಟಿ, ಅಮಿತ್ ಘೋರ್ಪಡೆ ಇತರರಿದ್ದರು.