10ರಂದು ಕಂದಾಯ ಸಚಿವರಿಂದ ಪ್ರಗತಿ ಪರಿಶೀಲನೆ

CTD 8 KRISHANABYREGW0DA-01
Published on

ಚಿತ್ರದುರ್ಗ: ಜಿಪಂ ಸಭಾಂಗಣದಲ್ಲಿ ಅ.10ರ ಬೆಳಗ್ಗೆ 10ಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯಲಿ ಕಂದಾಯ ಇಲಾಖೆ ವಿವಿಧ ಯೋಜನೆಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಇಲಾಖೆ ಪ್ರಧಾನ ಕಾರ‌್ಯದರ್ಶಿ, ಜಿಲ್ಲಾಧಿಕಾರಿ, ಜಿಪಂ ಸಿಇಒ, ಎಡಿಸಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್, ಭೂದಾಖಲೆಗಳ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು, ಜಿಲ್ಲಾ ನೋಂದಣಾಧಿಕಾರಿ, ಉಪನೋಂದಣಾಧಿಕಾರಿ, ಕಂದಾಯ ನಿರೀಕ್ಷಕರು, ಭೂಮಾಪಕರು, ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸುವರು.
ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ, ಇ-ಆಫೀಸ್ ಅನುಷ್ಠಾನ, ಕೆರೆಗಳ ಒತ್ತುವರಿ ವಿವರ, ಭೂಪರಿವರ್ತನೆ, ತಹಸೀಲ್ದಾರ್, ಎಸಿ ಹಾಗೂ ಡಿಸಿ ಕೋರ್ಟ್‌ಗಳಲ್ಲಿರುವ ಬಾಕಿ ಪ್ರಕರಣ, ನೋಂದಣಿ ಮತ್ತು ಮುದ್ರಾಂಕ, ಹೊಸ ಕಂದಾಯ ಗ್ರಾಮಗಳ ಘೋಷಣೆ ಮತ್ತಿತರ ಇಲಾಖೆಯ ವ್ಯಾಪ್ತಿಯ ವಿಷಯಗಳಲ್ಲಿ ಆಗಿರುವ ಪ್ರಗತಿಯನ್ನು ಸಚಿವರು ಪರಿಶೀಲಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net