10ರಂದು ಜಲವಿಮಾನ ಪ್ರವಾಸೋದ್ಯಮ ಕಾರ್ಯಕ್ರಮ

06-11-24--krs1
Published on

ಸಿದ್ಧತೆ ಪರಿಶೀಲಿಸಿದ ಡಿಸಿ ಕುಮಾರ

ಕೆ.ಆರ್.ಸಾಗರ : ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಪ್ರಾಯೋಗಿಕವಾಗಿ ಜಲ ವಿಮಾನ ಪ್ರವಾಸೋದ್ಯಮ ಕಾರ್ಯಕ್ರಮ ನ. 10 ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕುಮಾರ ಬುಧವಾರ ಅಧಿಕಾರಿಗಳೊಂದಿಗೆ ಸಿದ್ಧತೆ ಪರಿಶೀಲಿಸಿದರು.

ರಾಜ್ಯದಲ್ಲೇ ಮೊದಲ ಬಾರಿಗೆ 19 ಪ್ರವಾಸಿಗರು ಇರುವ ಮಿನಿ ಜಲವಿಮಾನ ಕೆಆರ್‌ಎಸ್ ಹಿನ್ನೀರಿನಲ್ಲಿ ಇಳಿಯಲಿದೆ. ಬೆಂಗಳೂರು ಅಥವಾ ಮೈಸೂರು ವಿಮಾನ ನಿಲ್ದಾಣದಿಂದ ಬರುವ ಪ್ರವಾಸಿಗರು, ಜಿಲ್ಲೆಯ ಕೆಲವು ಪ್ರೇಕ್ಷಣೀಯ ಸ್ಥಳ ವೀಕ್ಷಿಸಿ ಮತ್ತೆ ಅದೇ ವಿಮಾನದಲ್ಲಿ ಸ್ವಸ್ಥಾನಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಹೊಸ ಕನ್ನಂಬಾಡಿ ಗ್ರಾಮದ ಬಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದ ಪಕ್ಕದ ಹಿನ್ನೀರಿನ ಸ್ಥಳದಲ್ಲಿ ಸಿದ್ಧತೆ ಪರಿಶೀಲನೆ ನಡೆಸಿದರು. ಪಾಂಡವಪುರ ತಹಸೀಲ್ದಾರ್ ಸಂತೋಷ್ ಅವರೊಂದಿಗೆ ಚರ್ಚಿಸಿ ಸಲಹೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net