11.23 ಲಕ್ಷ ರೂ. ನಗದು ಸಂಗ್ರಹ

20--kkr1.(11-24 sasalu hundi
Published on

ಕಿಕ್ಕೇರಿ: ಹೋಬಳಿಯ ಸಾಸಲು ಗ್ರಾಮದ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲದ ಹುಂಡಿ ಎಣಿಕೆ ಬುಧವಾರ ಜರುಗಿತು.

ತಹಸೀಲ್ದಾರ್ ಲೆಫ್ಟಿನೆಂಟ್ ಕರ್ನಲ್ ಅಶೋಕ್ ಮಾರ್ಗದರ್ಶನದಲ್ಲಿ ಉಪತಹಸೀಲ್ದಾರ್ ವೀಣಾ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಎರಡೂ ದೇಗುಲದ ಹುಂಡಿಯಿಂದ 11,23,318 ರೂ. ನಗದು, 3 ಗ್ರಾಂ ಚಿನ್ನದ ಉಂಗುರು, 300 ಗ್ರಾಂ ಬೆಳ್ಳಿ ಸಿಕ್ಕಿದೆ. ಸೋಮೇಶ್ವರ ಹಾಗೂ ಶಂಭುಲಿಂಗೇಶ್ವರ ಬಾಲಾಲಯ ದೇಗುಲದಲ್ಲಿರುವ ಒಟ್ಟು 22 ಹುಂಡಿಗಳನ್ನು ಬೆಳಗ್ಗಿನಿಂದ ಸಂಜೆಯವರೆಗೆ ಕಿಕ್ಕೇರಿ ಪೊಲೀಸರ ಸರ್ಪಗಾವಲಿನಲ್ಲಿ ಎಣಿಕೆ ಮಾಡಲಾಯಿತು.

ಕಾಣಿಕೆ ಹಣವನ್ನು ಕೆ.ಆರ್. ಪೇಟೆ ಬ್ಯಾಂಕ್ ಆಫ್ ಬರೋಡಾ ಖಾತೆಗೆ ಜಮೆ ಮಾಡಲಾಯಿತು. ರಾಜಸ್ವ ನಿರೀಕ್ಷಕ ಡಿ.ಆರ್. ನರೇಂದ್ರ, ಗ್ರಾಮ ಆಡಳಿತಾಧಿಕಾರಿ ಬಿ.ಎಂ.ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನೀಲ್ ಗಾಣಿಗೇರ್, ಹರ್ಷಿತಾ, ವನಜಾಕ್ಷಿ, ಮುಜರಾಯಿ ಸಹಾಯಕಿ ಪೂರ್ಣಿಮಾ, ಗ್ರಾಮ ಸಹಾಯಕರು, ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ, ಗ್ರಾಮದ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net