ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘಕ್ಕೆ 11.34 ಲಕ್ಷ ರೂ. ಲಾಭ

ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘಕ್ಕೆ 11.34 ಲಕ್ಷ ರೂ. ಲಾಭ
Published on

ಸೋಮವಾರಪೇಟೆ: ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ 28ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಜಲಜಾ ಶೇಖರ್ ಅಧ್ಯಕ್ಷತೆಯಲ್ಲಿ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಮಹಿಳಾ ಪತ್ತಿನ ಸಹಕಾರ ಸಂಘ ಸ್ಥಾಪನೆಯಾಗಿ 28 ವರ್ಷಗಳು ಕಳೆದಿದ್ದು, ಪ್ರಸಕ್ತ ಸಾಲಿನಲ್ಲಿ 2023-24 ನೇ ಸಾಲಿನಲ್ಲಿ ರೂ. 11.34 ಲಕ್ಷ ಲಾಭಗಳಿಸಿದ್ದು, ಸದಸ್ಯರಿಗೆ ಶೇ.9 ಲಾಭಾಂಶ ನೀಡುತ್ತಿದೆ ಎಂದರು.

ಈಗಾಗಲೇ ಸಂಘವು ಸ್ವಂತ ಕಟ್ಟಡವನ್ನು ಹೊಂದಿದ್ದು, ಮುಂದುವರಿಕೆ ಕಟ್ಟಡದ ಕಾಮಗಾರಿ ನಡೆಯುತ್ತಿದೆ ಎಂದರು. ಸಭೆಯಲ್ಲಿ ಸಂಘದ ಹಿರಿಯ ಸದಸ್ಯರಾದ ನಾಗರತ್ನಮ್ಮ ಮತ್ತು ಎಲಿಜಬೆತ್ ಲೋಬೋ ಅವರುಗಳನ್ನು ಹಾಗೂ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದ ಇಬ್ಬರು ಸದಸ್ಯರಾದ ಭಾಗೀರಥಿ, ತಂಗಮ್ಮ ಅವರನ್ನು ಸನ್ಮಾನಿಸಲಾಯಿತು

ಸಂಘದ ಉಪಾಧ್ಯಕ್ಷರಾದ ಜಯಂತಿ ಶಿವಕುಮಾರ್, ನಿರ್ದೇಶಕರಾದ ಲೋಕೇಶ್ವರಿ ಗೋಪಾಲ್, ಬೇಬಿ ಚಂದ್ರಹಾಸ್, ಉಮಾ ರುದ್ರಪ್ರಾಸಾದ್, ಶೋಭಾ ಶಿವರಾಜ್, ಸಂಧ್ಯಾರಾಣಿ ಕೃಷ್ಣಪ್ಪ, ರೂಪಶ್ರೀ ರವಿಶಂಕರ್, ಲೀಲಾವತಿ ನಿರ್ವಾಣಿ, ಕವಿತಾ ವಿರೂಪಾಕ್ಷ, ವಿದ್ಯಾ ಸೋಮೇಶ್, ದಾಕ್ಷಾಯಣಿ ಶಿವಾನಂದ ಮೀನಾಕ್ಷಿ, ಸಿಇಒ ಪೃಥ್ವಿ ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net