11 ತಿಂಗಳ ಮಗುವಿಗೆ ಕರೊನಾ ದೃಢ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹುಬ್ಬಳ್ಳಿ ಭೈರಿದೇವರಕೊಪ್ಪದ 11 ತಿಂಗಳ ಮಗುವಿನಲ್ಲಿ ಕರೊನಾ ದೃಢಪಟ್ಟಿದ್ದು, ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಕಾಯಿಲೆ ಇದ್ದು, ಚಿಕಿತ್ಸೆ ಮುಂದುವರಿದೆ. ಮಗುವಿಗೆ ಯಾವುದೇ ಟ್ರಾವೆಲ್ಸ್​ ಹಿಸ್ಟ್ರಿ ಇಲ್ಲ. ಮಗುವಿನ ಆರೋಗ್ಯ ಸ್ಥಿರವಾಗಿದೆ.

ಸಾರ್ವಜನಿಕರು ಸಾಧ್ಯವಾದಷ್ಟು ಜನಸಂದಣಿಯಿಂದ ದೂರವಿರಬೇಕು. ಮನೆಯಿಂದ ಹೊರ ಹೋಗುವಾಗ ಮಾಸ್ಕ್​ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು. ಗರ್ಭಿಣಿಯರು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net