11 ತಿಂಗಳ ಮಗುವಿಗೆ ಕೋವಿಡ್ ದೃಢ

covid
Published on

ಹುಬ್ಬಳ್ಳಿ: ಇಲ್ಲಿಯ ಭೈರಿದೇವರಕೋಪ್ಪದ 11 ತಿಂಗಳ ಮಗುವಿನಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಕಾಯಿಲೆ ಇದ್ದು, ಚಿಕಿತ್ಸೆ ಮುಂದುವರಿದಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಸಾಧ್ಯವಾದಷ್ಟು ಜನಸಂದಣಿಯಿಂದ ದೂರ ಇರಬೇಕು. ಮನೆಯಿಂದ ಹೊರಹೋಗುವಾಗ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಗರ್ಭಿಣಿಯರು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net