ಲಾರಿ ಪಲ್ಟಿಯಾಗಿ 11 ಮಂದಿಗೆ ಗಂಭೀರ ಗಾಯ

accident-15
Published on

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಚಾಲಕ ಸೇರಿದಂತೆ 11 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಾಳ ಘಾಟಿ ರಸ್ತೆಯಲ್ಲಿ ನಡೆದಿದೆ. ತೆಲಂಗಾಣದಿಂದ ಮಂಗಳೂರಿಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿ ಮುಂಜಾನೆ 4ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಮಾಳ ಎಸ್.ಕೆ.ಬಾರ್ಡರ್ ಸಮೀಪ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಲಾರಿಯಲ್ಲಿದ್ದ 11 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ವಾಹನವೊಂದರಲ್ಲಿ ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net