

ಬೆಳಗಾವಿ : ಜಿಲ್ಲಾದ್ಯಂತ ಜೂ.12ರಂದು ಸೋಮವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನದ ಪ್ರಥಮ ಭಾಷೆ ಪರೀಕ್ಷೆಗೆ 110 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಪ್ರಥಮ ಭಾಷೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,065 ವಿದ್ಯಾರ್ಥಿಗಳ ಪೈಕಿ ಜಿಲ್ಲೆಯ ಆರು ವಲಯಗಳ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,955 ವಿಧ್ಯಾರ್ಥಿಗಳು ಮಾತ್ರ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.